ಗಾಜಿಯಾಬಾದ್ (ಉತ್ತರ ಪ್ರದೇಶ): ಮಹಾಮಾರಿ ಕೊರೊನಾ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಅನೇಕ ವರ್ಗದ ಜನರಿಗೆ ಸಹಾಯ ಮಾಡಿ ಎಲ್ಲರಿಂದಲೂ ಮೆಚ್ಚುಗೆಗೊಳಗಾಗಿರುವ ನಟ ಸೋನು ಸೂದ್ ಇದೀಗ ಮತ್ತೊಂದು ಮಹತ್ವದ ಕಾರ್ಯ ಮಾಡಿದ್ದಾರೆ.
ರಾಷ್ಟ್ರೀಯ ಕರಾಟೆ ಆಟಗಾರ್ತಿ ವಿಜೇಂದ್ರ ಕೌರ್ಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹಣಕಾಸಿನ ಸಹಾಯ ಮಾಡಿದ್ದು, ಈ ಮೂಲಕ ಎಲ್ಲರಿಗೂ ಮತ್ತಷ್ಟು ಹತ್ತಿರವಾಗಿದ್ದಾರೆ. ಜನವರಿ ತಿಂಗಳಲ್ಲಿ ಕರಾಟೆ ಅಭ್ಯಾಸ ಮಾಡುತ್ತಿದ್ದ ವೇಳೆ ವಿಜೇಂದ್ರ ಮೊಣಕಾಲಿನ ಮೂಳೆ ಮುರಿದಿತ್ತು. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೊಳಗಾಗಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿತ್ತು. ಆದರೆ ಹಣಕಾಸಿನ ತೊಂದರೆ ಕಾರಣ ಅದು ಸಾಧ್ಯವಾಗಿರಲಿಲ್ಲ. ಅನೇಕರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ವೇಳೆ ಟ್ವೀಟರ್ ಮೂಲಕ ಸೋನು ಸೂದ್ಗೆ ಈಕೆ ತನ್ನ ಸಂಕಷ್ಟ ಹೇಳಿಕೊಂಡಿದ್ದಳು.
ಇದನ್ನು ಓದಿ: ಯಾದಗಿರಿಯ ಬಡ ಕುಟುಂಬಕ್ಕೆ ಸೋನು ಸೂದ್ ಸಹಾಯ... ಮತ್ತೆ ಮಾನವೀಯತೆ ಮೆರೆದ ನಟ