ಚೆನ್ನೈ(ತಮಿಳುನಾಡು):ಕೊರೊನಾ ಸೋಂಕು ತಗುಲಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ.
ಎಸ್‌ಪಿಬಿ ಕೋವಿಡ್ ವರದಿ ನೆಗೆಟಿವ್: ಪುತ್ರ ಎಸ್ ಪಿ ಚರಣ್ ಮಾಹಿತಿ - ಎಸ್ಪಿ ಬಾಲಸುಬ್ರಮಣ್ಯಂ ಪುತ್ರ ಚರಣ್
ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಕುರಿತು ಮಾಹಿತಿಯನ್ನು ಅವರ ಪುತ್ರ ಎಸ್ ಪಿ ಚರಣ್ ಈ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆ ಎಸ್‌ಪಿಬಿ ಅವರ ಆರೋಗ್ಯ ಕುರಿತು ಶುಭ ಸುದ್ದಿ ಬಂದಿದೆ. ತಂದೆಯವರ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ. ಆದ್ರೆ ಶ್ವಾಸಕೋಶದಲ್ಲಿ ಸಮಸ್ಯೆ ಇರುವುದರಿಂದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಪಿಜಿಯೋಥೆರಫಿ ನಡೆಸಲಾಗುತ್ತಿದೆ. ತಂದೆಗೆ ನೀವು ತೋರಿಸಿದ ಪ್ರೀತಿ, ಹಾರೈಕೆಗೆ ಧನ್ಯವಾದ ಸಲ್ಲಿಸುವುದಾಗಿ ಚರಣ್ ತಿಳಿಸಿದ್ದಾರೆ. ಎಸ್‌ಪಿಬಿ ಅವರು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.