ಮಂಗಳೂರು:ರೂಪೇಶ್ ಶೆಟ್ಟಿ, ರಾಕೇಶ್ ಕದ್ರಿ ಜಂಟಿಯಾಗಿ ನಿರ್ದೇಶಿಸಿರುವ ತುಳು ಸಿನಿಮಾ 'ಗಿರಿಗಿಟ್' ಸಿನಿಮಾ ಪ್ರದರ್ಶನಕ್ಕೆ ಮಂಗಳೂರು 5ನೇ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ವಕೀಲರ ಅವಹೇಳನ ಆರೋಪ....'ಗಿರಿಗಿಟ್' ತುಳು ಸಿನಿಮಾ ಪ್ರದರ್ಶನಕ್ಕೆ ತಡೆಯಾಜ್ಞೆ - ನವೀನ್ ಡಿ. ಪಡೀಲು ಸಿನಿಮಾ
ಆರ್ಜೆ ರೂಪೇಶ್ ಶೆಟ್ಟಿ ಚಿತ್ರಕಥೆ ಬರೆದು ನಿರ್ದೇಶಿಸಿರುವ 'ಗಿರಿಗಿಟ್' ಸಿನಿಮಾದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು 5ನೇ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಸಿನಿಮಾಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ.
ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇದೆ ಎಂದು ಆರೋಪ ಮಾಡಲಾಗಿದೆ. ಹಾಸ್ಯ ನಟನೋರ್ವ ವಕೀಲರಿಗೆ ಅವಮಾನವಾಗುವಂತೆ ಅಭಿನಯಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ವಕೀಲರ ಸಂಘ ನಿನ್ನೆ ಕೋರ್ಟ್ ಮೆಟ್ಟಿಲೇರಿತ್ತು. ಸಿನಿಮಾ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ನ್ಯಾಯಾಧೀಶರು ಸಿನಿಮಾಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಆರ್ಜೆ ರೂಪೇಶ್ ಶೆಟ್ಟಿ ಚಿತ್ರಕಥೆ ಬರೆದು ನಿರ್ದೇಶಿಸಿರುವ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ನವೀನ್ ಡಿ. ಪಡೀಲು ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಮಂಜುನಾಥ್ ಅತ್ತಾವರ್ 'ಗಿರಿಗಿಟ್' ಸಿನಿಮಾದ ನಿರ್ಮಾಪಕರು.