ಮೈಸೂರು:ಭಾರತಿ ವಿಷ್ಣುವರ್ಧನ್ ಅವರದಶಕದ ಹೋರಾಟದ ಫಲವಾಗಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಹಾಳಾಲು ಗ್ರಾಮದ 2 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೆಬಿನಾರ್ ಮೂಲಕ ಚಾಲನೆ ನೀಡಿದರು. ಈ ಮೂಲಕ ವಿಷ್ಣು ಸ್ಮಾರಕ ಅವರ ಹುಟ್ಟೂರಿನಲ್ಲಿಯೇ ಆಗಬೇಕೆಂದು ಆಗ್ರಹಿಸುತ್ತಲೇ ಬಂದಿದ್ದ ಭಾರತಿ ವಿಷ್ಣುವರ್ಧನ್ ಅವರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ವಿಷ್ಣು ಸ್ಮಾರಕಕ್ಕೆ ಶಂಕುಸ್ಥಾಪನೆ ಭಾರತಿ ವಿಷ್ಣುವರ್ಧನ್, ಅಳಿಯಾ ಅನಿರುದ್ದ್, ಪತ್ನಿ ಕೀರ್ತಿ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಅನೇಕ ಗಣ್ಯರು ವಿಷ್ಣು ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರದ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಸಾಹಸ ಸಿಂಹ ವಿಷ್ಣುವರ್ಧನ್ ಅವರು ಜನಿಸಿದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಅವರ ಸ್ಮಾರಕ ನಿರ್ಮಾಣವಾಗಬೇಕು ಎನ್ನುವ ಕೂಗಿಗೆ ಸಾಕಷ್ಟು ಅಡೆ ತಡೆಗಳು ಎದರುರಾಗಿದ್ದವು. ಭಾರತಿ ವಿಷ್ಣುವರ್ಧನ್ ಕುಟುಂಬದ ಸತತ ಹೋರಾಟದ ಫಲವಾಗಿ ಕೊನೆಗೂ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಚಾಲನೆ ದೊರೆತಿದೆ.