ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ, ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದ 8 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ. 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್ ರಾಜ್‌ಕುಮಾರ್ ಮತ್ತು ಚಿತ್ರ ತಂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯುವರತ್ನ ಚಿತ್ರ ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದು, ಚಿತ್ರತಂಡ ಹಾಗೂ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ.