ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ 'ಶುಗರ್ ಫ್ಯಾಕ್ಟರಿ' ಚಿತ್ರವನ್ನು, ನಟಿ ಅಮೂಲ್ಯ ಸೋದರ ದೀಪಕ್ ಅರಸ್ ನಿರ್ದೇಶಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಸದ್ಯ ಚಿತ್ರದ ಶೀರ್ಷಿಕೆಯಿಂದಲೇ ಸದ್ದು ಮಾಡುತ್ತಿರುವ ಶುಗರ್ ಫ್ಯಾಕ್ಟರಿ, ಬೆಂಗಳೂರಿನ ನಂದಿನಿ ಲೇಔಟ್ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಬ್ರಾಹ್ಮಿ ಮುಹೂರ್ತ ಸೆಟ್ಟೇರಿದೆ.
ಬ್ರಾಹ್ಮಿ ಮುಹೂರ್ತದಲ್ಲಿ ಸೆಟ್ಟೇರಿದ ಡಾರ್ಲಿಂಗ್ ಕೃಷ್ಣನ 'ಶುಗರ್ ಫ್ಯಾಕ್ಟರಿ'
ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಇತ್ತೀಚೆಗೆ ಮುಹೂರ್ತ ಆಚರಿಸಿಕೊಂಡಿದೆ. ನಿರ್ದೇಶಕ ತರುಣ್ ಸುಧೀರ್ 'ಶುಗರ್ ಫ್ಯಾಕ್ಟರಿ' ಚಿತ್ರಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ:ಏಳು ವರ್ಷಗಳ ನಂತರ ಕೊನೆಗೂ ಕೂಡಿ ಬಂದು ಕಾಲ
ನಿರ್ದೇಶಕ ತರುಣ್ ಸುಧೀರ್ 'ಶುಗರ್ ಫ್ಯಾಕ್ಟರಿ' ಚಿತ್ರಕ್ಕೆ ಕ್ಲಾಪ್ ಮಾಡಿದ್ದಾರೆ. ದೀಪಕ್ ತಂಗಿ ಅಮೂಲ್ಯ ಈ ಮುಹೂರ್ತ ಸಮಾರಂಭದ ಕೇಂದ್ರ ಬಿಂದು ಆಗಿದ್ದರು. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಮೂರು ಜನ ನಾಯಕಿಯರು ರೊಮ್ಯಾನ್ಸ್ ಮಾಡಲಿದ್ದಾರೆ. ಸೋನಾಲ್ ಮಾಂಟೆರೋ ಹಾಗೂ ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಕೃಷ್ಣ ಜೊತೆ ಸ್ಕ್ರೀನ್ ಹಂಚಿಕೊಳ್ಳುತ್ತಿದ್ದಾರೆ. 'ಮನಸಾಲಾಜಿ' ಸಿನಿಮಾ ಬಳಿಕ, ಚಿತ್ರರಂಗದಿಂದ ದೂರ ಉಳಿದಿದ್ದ ಅಮೂಲ್ಯ ಸಹೋದರ ದೀಪಕ್ ಅರಸ್ ಈಗ 'ಶುಗರ್ ಫ್ಯಾಕ್ಟರಿ' ಸಿನಿಮಾ ಮೂಲಕ, ಮತ್ತೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಚಿತ್ರದಲ್ಲಿ 7 ಹಾಡುಗಳಿದ್ದು, ಚೇತನ್ ಕುಮಾರ್, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಮುಂತಾದವರು ಸಾಹಿತ್ಯ ಬರೆಯುತ್ತಿದ್ದಾರೆ . ಕಬೀರ್ ರಫಿ ಸಂಗೀತ ನೀಡುತ್ತಿರುವ 'ಶುಗರ್ ಫ್ಯಾಕ್ಟರಿ' ಚಿತ್ರವನ್ನು ಸಂತೋಷ್ ರೈ ಪಾತಾಜೆ ತಮ್ಮ ಛಾಯಾಗ್ರಹಣದ ಮೂಲಕ ಸೆರೆ ಹಿಡಿಯಲಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.