ಕರ್ನಾಟಕ

karnataka

ETV Bharat / sitara

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ಟೀಸರ್ ರಿಲೀಸ್​! - ನಟ ಕೃಷ್ಣ

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ಟೀಸರ್ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರ ತಂಡ ಮಾಹಿತಿ ನೀಡಿದೆ.

sugar-factory-teaser-released-for-darling-krishna-birthday
ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ಟೀಸರ್ ಬಿಡುಗಡೆ

By

Published : Jun 3, 2021, 10:48 PM IST

ಬೆಂಗಳೂರು:ಡಾರ್ಲಿಂಗ್ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ ಚಿತ್ರದ ಟೀಸರ್ ಬಿಡುಗಡೆಗೆ ಚಿತ್ರತಂಡ ಪ್ಲಾನ್ ಮಾಡಿದೆ. ಇದೇ ಜೂನ್ 12ಕ್ಕೆ ಕೃಷ್ಣ ಹುಟ್ಟುಹಬ್ಬದ ಈ ಹಿನ್ನೆಲೆ ಚಿತ್ರದ ಟೀಸರ್​ ಬಿಡುಗಡೆಯಾಗಲಿದೆ.

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ಟೀಸರ್ ಬಿಡುಗಡೆ

ಡಾರ್ಲಿಂಗ್ ಕೃಷ್ಣಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್​ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ, ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ಟೀಸರ್ ಬಿಡುಗಡೆ

ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್​​ನಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಸಂಜೆ 5 ಗಂಟೆಗೆ ಇನ್​​ಸ್ಟಾಗ್ರಾಂ ಮೂಲಕ ಲೈವ್ನ​ಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ. ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ.ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‌

ಬಾಲ ನಟಿಯಾಗಿ ಬಣ್ಣ ಹಚ್ಚಿದ ಬಿ.ಜಯಾ ಇನ್ನು ನೆನಪು; ಇಲ್ಲಿದೆ ಆ ಅಮರ ಗಳಿಗೆಗಳ ಸಾರ ಸಂಗ್ರಹ!

ABOUT THE AUTHOR

...view details