ಕರ್ನಾಟಕ

karnataka

ETV Bharat / sitara

ಸುಮಲತ ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರ ನಿರ್ಧಾರ: ಶಿವರಾಜ್​ಕುಮಾರ್​ - ಶಿವರಾಜ್​ಕುಮಾರ್​

ಸುಮಲತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ನಟ ಶಿವರಾಜ್​ಕುಮಾರ್ 'ಚುನಾವಣೆಯಲ್ಲಿ ಸ್ಪರ್ಧಿಸುವುದು ಬಿಡುವುದು ಅವರ ವೈಯಕ್ತಿಕ ನಿರ್ಧಾರ' ಎಂದು ಹೇಳಿದ್ದಾರೆ.

ಶಿವರಾಜ್​ಕುಮಾರ್

By

Published : Mar 14, 2019, 7:03 PM IST

ಸುಮಲತ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರ ವೈಯಕ್ತಿಕ ನಿರ್ಧಾರಕ್ಕೆ ಬಿಟ್ಟದ್ದು ಎಂದು ನಟ ಶಿವರಾಜ್​​ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವರಾಜ್​ಕುಮಾರ್

ವಿಶ್ವ ಮೂತ್ರಪಿಂಡ ದಿನಾಚರಣೆಯ ಅಂಗವಾಗಿ ನಗರದ ಎಂ.ಎಸ್​​​​. ರಾಮಯ್ಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಮಹಿಳಾ ದಿನಾಚರಣೆಯಂದು ಹೆಚ್​​​.ಡಿ.ರೇವಣ್ಣ ಸುಮಲತ ಅಂಬರೀಶ್ ಅವರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶಿವಣ್ಣ ಪ್ರತಿಕ್ರಿಯಿಸಿದರು. 'ಸುಮಲತ ಅವರು ಚುನಾವಣೆಗೆ ಸ್ಪರ್ಧಿಸುವುದು ಬಿಡುವುದು ಅವರಿಗೆ ಬಿಟ್ಟ ವಿಷಯ. ಅಂಬರೀಶ್ ನನ್ನ ತಂದೆ ಸಮಾನ. ಅವರ ಬಗ್ಗೆ ನನಗೆ ಯಾವಾಗಲೂ ಗೌರವ ಇದ್ದೇ ಇರುತ್ತದೆ. ಸುಮಲತ ಅವರಿಗೆ ಒಳ್ಳೆಯದಾಗಲಿ' ಎಂದು ಹೇಳಿದರು.

ಇನ್ನು ತಮ್ಮ ಪತ್ನಿ ಗೀತ ಅವರ ರಾಜಕೀಯ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಒಬ್ಬ ಗಂಡನಾಗಿ ನನ್ನ ಕರ್ತವ್ಯವನ್ನು ನಿಭಾಯಿಸಬೇಕು. ನನ್ನ ಪತ್ನಿಯನ್ನು ನಾನು ಪ್ರೀತಿಸುತ್ತೇನೆ. ಆದ್ದರಿಂದ ಆಕೆಯನ್ನು ಬೆಂಬಲಿಸುತ್ತೇನೆ' ಎಂದು ಹೇಳಿದರು.

ABOUT THE AUTHOR

...view details