ಬೆಂಗಳೂರು: ವಿಶ್ವಾದ್ಯಂತ ಕೊರೊನಾ ವೈರಸ್ ಮಹಾಮಾರಿ ಸಾವಿನ ಸರಣಿ ಮುಂದುವರಿಸಿದೆ. ಈ ಕೊರೊನಾ ವೈರಸ್ ಹರಡದಂತೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇನ್ನು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ ಅಂತಾ, ಮುಖ್ಯಮಂತ್ರಿ ಬಿ.ಎಎಸ್. ಯಡಿಯೂರಪ್ಪ ಸರ್ಕಾರದ ಜೊತೆ ಕೈಜೋಡಿಸಿ ಎಂದು ಕೆಲವು ದಿನಗಳ ಹಿಂದೆ ಮನವಿ ಮಾಡಿದ್ದರು.
ಕೊರೊನಾ ತಡೆಗಟ್ಟಲು 50 ಲಕ್ಷ ರೂ. ದೇಣಿಗೆ ನೀಡಿದ ಸುಮಲತಾ - sumalata ambarish donates for corona
ಸಂಸದೆ ಸುಮಲತಾ ಅಂಬರೀಶ್, ಕೊರೊನಾ ನಿಯಂತ್ರಣಿಸಲು 50 ಲಕ್ಷ ರೂಪಾಯಿನ್ನು ದೇಣಿಗೆಯಾಗಿ ನೀಡಿದ್ದಾರೆ. ತಮ್ಮ 2 ತಿಂಗಳ ವೇತನ ಅಂದರೆ 2 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎರಡು ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಮಂಡ್ಯದ ಮಿಮ್ಸ್ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50ಲಕ್ಷ ರೂ. ಗಳನ್ನು ನೀಡಿದ್ದೇನೆ, ಅಂತಾ ತಮ್ಮ ಟ್ಟೀಟ್ಟರ್ ಖಾತೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಂಚಿಕೊಂಡಿದ್ದಾರೆ.
ಇದಕ್ಕೆ ಸ್ಪಂದಿಸಿರುವ ಸಂಸದೆ ಸುಮಲತಾ ಅಂಬರೀಶ್, ಕೊರೊನಾ ನಿಯಂತ್ರಿಸಲು 50 ಲಕ್ಷ ರೂಪಾಯಿನ್ನು ದೇಣಿಗೆಯಾಗಿ ನೀಡಿದ್ದಾರೆ. ತಮ್ಮ 2 ತಿಂಗಳ ವೇತನ ಅಂದರೆ 2 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎರಡು ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡಿದ್ದಾರೆ.
ಮೊದಲಿಗೆ ಮಂಡ್ಯದ ಮಿಮ್ಸ್ಗೆ ಕೊರೊನಾ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50ಲಕ್ಷ ರೂ. ಗಳನ್ನು ನೀಡಿದ್ದೇನೆ, ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಂಚಿಕೊಂಡಿದ್ದಾರೆ. ಈ ಮೂಲಕ ಸಂಸದೆ ಸುಮಲತಾ ಅಂಬರೀಶ್ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.