ಕರ್ನಾಟಕ

karnataka

ETV Bharat / sitara

ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್: ಸಿಎಂಗೆ ಧನ್ಯವಾದ ಅರ್ಪಿಸಿದ ಸುನೀಲ್ ಪುರಾಣಿಕ್ - 2nd COVID package

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷದೊಂದಿಗೆ ಮಾನ್ಯ ಮುಖ್ಯಮಂತ್ರಿಯವರು ಎಲ್ಲರಿಗೂ ಕೊರೊನಾ ಸಂಕಷ್ಟದಲ್ಲಿ ಕೈಹಿಡಿದಿದ್ದಾರೆ. ಮೊದಲ ಪ್ಯಾಕೇಜ್​ನಲ್ಲಿ ಚಿತ್ರೋದ್ಯಮಕ್ಕೆ ಪ್ಯಾಕೇಜ್ ಕೈತಪ್ಪಿತ್ತು. ಆದರೆ ತಾವು ಮಾಡಿದ ಮನವಿಗೆ ಅವರು ಇದೀಗ ಸ್ಪಂದಿಸಿದ್ದಾರೆ ಎಂದು ಸುನೀಲ್ ಪುರಾಣಿಕ್ ಅವರು ಹೇಳಿದ್ದಾರೆ.

ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್
ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್

By

Published : Jun 4, 2021, 4:17 AM IST

ಬೆಂಗಳೂರು: ಕನ್ನಡ ಚಿತ್ರೋದ್ಯಮದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ಅವರನ್ನು ಕರ್ನಾಟಕದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅಭಿನಂದಿಸಿದ್ದಾರೆ.

ಕೊರೊನಾ ಲಾಕ್ ಡೌನ್​ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರೋದ್ಯಮಕ್ಕೆ ಆಸರೆಯಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರೊಂದಿಗೆ ಮಾನ್ಯ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಯವರು ಮನವಿಗೆ ಸ್ಪಂದಿಸಿ ಪ್ಯಾಕೇಜ್ ನೀಡಿದ್ದಾರೆ. ಸಂಕಷ್ಟದಲ್ಲಿ ಪ್ಯಾಕೇಜ್ ನೀಡಿದ ಮುಖ್ಯಮಂತ್ರಿಯವರನ್ನು ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷದೊಂದಿಗೆ ಮಾನ್ಯ ಮುಖ್ಯಮಂತ್ರಿಯವರು ಎಲ್ಲರಿಗೂ ಕೊರೊನಾ ಸಂಕಷ್ಟದಲ್ಲಿ ಕೈಹಿಡಿದಿದ್ದಾರೆ. ಮೊದಲ ಪ್ಯಾಕೇಜ್​ನಲ್ಲಿ ಚಿತ್ರೋದ್ಯಮಕ್ಕೆ ಪ್ಯಾಕೇಜ್ ಕೈತಪ್ಪಿತ್ತು. ಆದರೆ ತಾವು ಮಾಡಿದ ಮನವಿಗೆ ಅವರು ಇದೀಗ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಕೊರೋನಾ ಸಂದರ್ಭದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮಾನ್ಯ ಮುಖ್ಯಮಂತ್ರಿಯವರು ವಿಶೇಷ ಕಾಳಜಿಯಿಂದ ಆಹಾರ ಸಾಮಗ್ರಿಗಳ ಖರೀದಿಗೆ ಸಂಕಷ್ಟದಲ್ಲಿದ್ದ ಚಿತ್ರರಂಗದ 6500 ಮಂದಿಗೆ ತಲಾ ರೂ.3000 ಮೌಲ್ಯದ ರಿಲೆಯನ್ಸ್ ಕೂಪನ್ ಕೊಡಿಸಿದ್ದರು. ಅಲ್ಲದೆ, ಇತ್ತೀಚಿಗೆ ಚಿತ್ರೋದ್ಯಮದವರಿಗಾಗಿ ವಿಶೇಷವಾಗಿ ಲಸಿಕೆಯನ್ನೂ ನೀಡಿ ಸಹಾಯ ಮಾಡಿದ್ದಾರೆ. ಇದನ್ನು ಕನ್ನಡ ಚಿತ್ರೋದ್ಯಮ ಸ್ಮರಿಸುತ್ತದೆ ಎಂದು ಸುನೀಲ್ ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:Lockdown: ಸರ್ಕಾರ ಘೋಷಿಸಿದ ಎರಡನೇ ಪ್ಯಾಕೇಜ್​ನಲ್ಲಿ ಯಾರಿಗೆ, ಎಷ್ಟು ಪರಿಹಾರ?

ABOUT THE AUTHOR

...view details