ಕಾಲಿವುಡ್ ಸೂಪರ್ ಸ್ಟಾರ್ ಸೂರ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಟ್ವೀಟ್ ಮುಖಾಂತರ ತಿಳಿಸಿದ್ದಾರೆ.
'ನಾನು ಕೊರೊನಾಗೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾವಿನ್ನೂ ಕೊರೊನಾದಿಂದ ಹೊರಬಂದಿಲ್ಲ. ಹಾಗೆಂದು ಭಯ ಬೇಡ. ಕೊರೊನಾ ಸೋಂಕದಂತೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡರೆ ಸಾಕು. ಕೊರೊನಾ ಬಂದಾಗಿನಿಂದ ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳು', ಎಂದು ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.