ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ತಮಿಳು ಚಿತ್ರರಂಗದ ಹಾಸ್ಯ ನಟ ಯೋಗಿಬಾಬು ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಆಗಿದ್ದರು. ಇಂದು ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸೆಂಚುರಿ ಸ್ಟಾರ್ ಭೇಟಿ ಮಾಡಿ ಸನ್ಮಾನ ಮಾಡಿದ ತಮಿಳು ಹಾಸ್ಯನಟ - Yogibabu met Puneet
ಕಳೆದ ವಾರ ಪುನೀತ್ ಅವರನ್ನು ಭೇಟಿ ಮಾಡಿದ್ದ ತಮಿಳು ಹಾಸ್ಯನಟ ಯೋಗಿ ಬಾಬು ಇಂದು ಭಜರಂಗಿ 2 ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸರ್ಕಾರದ ಗೈಡ್ ಲೈನ್ಸ್ ಪ್ರಕಾರ ಶಿವರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರ ಭಜರಂಗಿ 2 ಚಿತ್ರೀಕರಣ ನಡೆಯುತ್ತಿದೆ. ಈ ಶೂಟಿಂಗ್ ಮಧ್ಯೆ ಹಾಸ್ಯ ನಟ ಯೋಗಿ ಬಾಬು, ಭಜರಂಗಿ 2 ಸಿನಿಮಾ ಅಡ್ಡಾದಲ್ಲಿ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ, ಸಿನಿಮಾ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಕನ್ನಡ ಚಿತ್ರರಂಗದ ನಾಯಕತ್ವದ ಜವಾಬ್ದಾರಿ ಹೊತ್ತಿರುವ ಸೆಂಚುರಿ ಸ್ಟಾರ್ ಅವರಿಗೆ ಯೋಗಿ ಬಾಬು ಪೇಟಾ ತೋಡಿಸಿ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಶಿವರಾಜ್ ಕುಮಾರ್ ಕೂಡಾ ಯೋಗಿ ಬಾಬು ಜೊತೆ ತಮಿಳು ಸಿನಿಮಾಗಳ ಕುರಿತು ಮಾತುಕತೆ ನಡೆಸಿದ್ದಾರಂತೆ.
ಸದ್ಯ ತಮಿಳು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟರಾದ ರಜನಿಕಾಂತ್, ವಿಜಯ್, ಸೂರ್ಯ ಸಿನಿಮಾಗಳಲ್ಲಿ ಯೋಗಿ ಬಾಬು ಇರಲೇಬೇಕು ಎಂಬ ಬ್ರ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ನಯನತಾರ ಜೊತೆ ಕೋಲಮಾವು ಕೋಕಿಲ ಚಿತ್ರದಲ್ಲಿ ಯೋಗಿ ಬಾಬು ನಾಯಕ ನಟನಾಗಿ ಮಿಂಚಿದ್ರು. ಈ ಸಿನಿಮಾ ಯೋಗಿ ಬಾಬುಗೆ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿತ್ತು.