ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರು ಹಾಗೂ ತಂತ್ರಜ್ಞರಿಗೆ ನೆರವಾಗುವಂತೆ ಒತ್ತಾಯಿಸಿ ಟೆಲಿವಿಷನ್ ಅಸೋಸಿಯೇಷನ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಿರುತೆರೆ ಕಲಾವಿದರು, ತಂತ್ರಜ್ಞರು ಸೇರಿದಂತೆ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ರಕ್ಷಣೆಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಇತ್ತೀಚೆಗೆ ಸುಮಾರು 40ಕ್ಕೂ ಹೆಚ್ಚು ಧಾರವಾಹಿಗಳನ್ನು ಸ್ಥಗಿತಗೊಳಿಸಲಾಗಿದೆ. ಈ ವೇಳೆಯಲ್ಲಿ ಡಬ್ಬಿಂಗ್ ಧಾರಾವಾಹಿಗಳನ್ನು ಹೇರಲಾಗುತ್ತಿದೆ. ಇದರಿಂದ ಕಲಾವಿದರು ಹಾಗೂ ತಂತ್ರಜ್ಞರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸರ್ಕಾರ ಕಾನೂನಾತ್ಮಕ ರೀತಿ ನಿಯಮ ರೂಪಿಸಿ ಡಬ್ಬಿಂಗ್ ಧಾರಾವಾಹಿ ಪ್ರಸಾರಕ್ಕೆ ಕಡಿವಾಣ ಹಾಕುವ ಬಗ್ಗೆ ನಿಯಮ ರೂಪಿಸಬೇಕೆಂದು ಅವರು ಒತ್ತಾಯಿಸಿದರು.
ಡಬ್ಬಿಂಗ್ ಧಾರಾವಾಹಿಗಳ ಹಾವಳಿ ತಡೆಯಲು ನಿಯಮ ರೂಪಿಸಿ.. ಕಿರುತೆರೆ ಕಲಾವಿದರಿಂದ ಸರ್ಕಾರಕ್ಕೆ ಮನವಿ
ಇತ್ತೀಚೆಗೆ ಖಾಸಗಿ ವಾಹಿನಿಗಳಲ್ಲಿ ಹೇರಲಾಗುತ್ತಿರುವ ಡಬ್ಬಿಂಗ್ ಧಾರವಾಹಿಗಳಿಗೆ ಕಡಿವಾಣ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ನೀಡುವಂತೆ ಕಿರುತೆರೆ ಕಲಾವಿದರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಿರುತೆರೆ ಕಲಾವಿದರಿಂದ ಸರ್ಕಾರಕ್ಕೆ ಮನವಿ
ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಬಿ.ಸುರೇಶ, ಲಿಂಗದೇವರು ಹಳೆಮನೆ, ಪಿ. ಶೇಷಾದ್ರಿ ಹಾಗೂ ಹಿರಿಯ ನಟ ದತ್ತಣ್ಣ ಸೇರಿ ಹಲವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಈ ಬಗ್ಗೆ ತಾವು ಕಲಾವಿದರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.