ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಇನ್ನೇನು ಮುಕ್ತಾಯದ ಹಂತಕ್ಕೆ ತಲುಪಿದೆ. ಇವತ್ತಿನಿಂದ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಶುರು ಮಾಡಲಾಗಿದ್ದು, ಈ ಬಗ್ಗೆ ನಟ ಸುದೀಪ್ ಫೋಟೋವೊಂದನ್ನು ಹಾಕಿ ಮಾಹಿತಿ ನೀಡಿದ್ದಾರೆ.
ಫ್ಯಾಂಟಮ್ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಿದೆ. ಚಿತ್ರೀಕರಣಕ್ಕೆ ಹಾಕಿರುವ ಶೂಟಿಂಗ್ ಸೆಟ್ ಹಾಗೂ ಸ್ಥಳ ನನಗೆ ತುಂಬಾ ಇಷ್ಟವಾಯಿತು ಎಂದು ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಮಗಳು ನಿಹಾರಿಕಾ ಬಗ್ಗೆ ಭಾವನಾತ್ಮಕ ಟ್ವೀಟ್ ಮಾಡಿದ ಜಿರಂಜೀವಿ
ಕಳೆದ ಹಲವು ದಿನಗಳಿಂದ ಫ್ಯಾಂಟಮ್ ಸಿನಿಮಾದ ಶೂಟಿಂಗ್ ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲೇ ಮಾಡಲಾಗಿದ್ದು, ನವೆಂಬರ್ 22ರಂದು ತಮ್ಮ ಶೂಟಿಂಗ್ ಮುಗಿಸಿದ್ದ ಸುದೀಪ್ ಅಲ್ಲಿಂದ ನಿರ್ಗಮಿಸಿದ್ದರು. ಸದ್ಯ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಮತ್ತೊಂದು ವಿಶೇಷ ಏನಂದ್ರೆ ಸುದೀಪ್ ಈ ಸಿನಿಮಾ ಮೂಲಕ ಮತ್ತೊಂದು ಬಾರಿ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ವಿಕ್ರಾಂತ್ ರೋಣಾ ಪಾತ್ರಕ್ಕೆ ಸುದೀಪ್ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಅನುಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.