ಕನ್ನಡ ಚಿತ್ರರಂಗದ ದೊಡ್ಮನೆ ಮಗನಾಗಿ ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೇವನಾಗಿ ಮೆರೆದರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್. ರಾಜ್ ಕುಟುಂಬದಿಂದ ಇಂದು ಅಪ್ಪುಗೆ ಹಾಲು-ತುಪ್ಪ ವಿಧಿ ವಿಧಾನ ಕಾರ್ಯ ನಡೆಯಲಿದೆ. ಹೀಗಾಗಿ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಸಮಾಧಿ ಬಳಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ: ಪುನೀತ್ ಸಮಾಧಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ - ಪುನೀತ್ ರಾಜ್ ಕುಮಾರ್ ಸುದ್ದಿ
ರಾಜ್‍ಕುಮಾರ್ ಕುಟುಂಬದಿಂದ ಇಂದು ಪುನೀತ್ ರಾಜ್‍ಕುಮಾರ್ ಅವರಿಗೆ ಹಾಲು-ತುಪ್ಪ ವಿಧಿವಿಧಾನ ಕಾರ್ಯ ಇದ್ದು, ಪುನೀತ್ ಸಮಾಧಿ ಬಳಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪುನೀತ್ ಸಮಾಧಿಯ ಬಳಿ ಹಾಲು ತುಪ್ಪ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಮಾಧಿಗೆ ನಮಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಮಂಜುನಾಥ್ ಇಂದು ಹಾಲು ತುಪ್ಪ ಕಾರ್ಯಕ್ರಮ ಮುಗಿಯವರೆಗೂ ಅಭಿಮಾನಿಗಳಿಗೆ, ಇನ್ನೂ ಎರಡು ದಿನ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೂ ರಾಜ್‍ಕುಮಾರ್ ಸಮಾಧಿ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಹಾಗಾಗಿ ರಾಜ್‍ಕುಮಾರ್ ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಂಗಳವಾರ ಹಾಲು ತುಪ್ಪ ಕಾರ್ಯ ಹಿನ್ನೆಲೆ, ಪುನೀತ್ ರಾಜ್‍ಕುಮಾರ್ ಸಮಾಧಿಗೆ, ಕೊಯಮತ್ತೂರನಿಂದ ತರಿಸಲಾದ ಹಲವಾರು ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ ಎಂದು ಡೆಕೋರೇಟರ್ ದರ್ಶನ್ ಹೇಳಿದರು. ಇಂದು ಬೆಳಗ್ಗೆ 9 ಗಂಟೆಗೆ ಹಾಲು ತುಪ್ಪ ಕಾರ್ಯ ಜರುಗಲಿದೆ. ಈ ಕಾರ್ಯಕ್ಕೆ ರಾಜ್ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಸ್ನೇಹಿತರು ಭಾಗಿಯಾಗಲಿದ್ದಾರೆ. ಸದ್ಯಕ್ಕೆ ಅಭಿಮಾನಿಗಳಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ತಿಳಿದುಬಂದಿದೆ.