ಹೈದರಾಬಾದ್ :ತೆಲುಗು ನಟ ರಾಮ್ ಚರಣ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿ ಖಚಿತಪಡಿಸಿರುವ ಮಗಧೀರ ನಟ, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದು, ಶೀಘ್ರ ಗುಣಮುಖನಾಗುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮನೆಗೆ ಮರಳಿದ ರಜಿನಿಕಾಂತ್ರನ್ನು ಆರತಿ ಮಾಡಿ ಬರಮಾಡಿಕೊಂಡ ಪತ್ನಿ
ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಚೆರ್ರಿ ಟ್ವೀಟ್ ಮಾಡಿದ್ದಾರೆ. ಸದ್ಯಕ್ಕೆ ಇವರು ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಆರ್ಆರ್ಆರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.