ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 53ನೇ ಜನ್ಮ ದಿನದ ಪ್ರಯಕ್ತ ಉಪ್ಪಿ ನಟನೆಯ ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ನಿರ್ದೇಶಕ ಆರ್ ಚಂದ್ರು ನಿರ್ದೇಶನದಲ್ಲಿ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ.
ಉಪೇಂದ್ರ ಹುಟ್ಟುಹಬ್ಬದ ಸವಿನೆನಪಿಗಾಗಿ ಈ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮೋಷನ್ ಪೋಸ್ಟರ್ ನೋಡಿ ಉಪೇಂದ್ರ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಈಗಾಗಲೇ ಶೇ ಅರವತ್ತರಷ್ಟು ಚಿತ್ರೀಕರಣ ಮುಗಿದಿದ್ದು, ಇದೇ ತಿಂಗಳ ಕೊನೆಗೆ ಮಿನರ್ವಮಿಲ್ನಲ್ಲಿ ನಿರ್ಮಿಸಲಾಗಿರುವ ಅದ್ಧೂರಿ ಸೆಟ್ನಲ್ಲಿ ಮತ್ತೊಂದು ಹಂತದ ಚಿತ್ರೀಕರಣ ನಡೆಯಲಿದೆ.
ಎಂಟಿಬಿ ನಾಗರಾಜ್ ಅರ್ಪಿಸುವ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಚಂದ್ರು ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೋಡ್ಯೂಸರ್ ಆಗಿ ರಾಜಶೇಖರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಜೆ. ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿದೆ.
- https://youtu.be/65EHMDnah8Y