ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ವುಡ್ ಖ್ಯಾತ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುರೇಖಾ ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ.
ಡಾ. ರಾಜ್ಕುಮಾರ್ ಜೊತೆ ನಾಯಕಿಯಾಗಿ ಅಭಿನಯಿಸಿದ್ದ ನಟಿ ಸುರೇಖಾ ವಿಧಿವಶ - veteran-actress-surekha-is-no-more
ಸ್ಯಾಂಡಲ್ವುಡ್ನ ವರನಟ ಡಾ. ರಾಜ್ಕುಮಾರ್ ಜೊತೆ ಅಭಿನಯಿಸಿದ್ದ ನಟಿ ಸುರೇಖಾ ಇಂದು ವಿಧಿವಶರಾಗಿದ್ದಾರೆ. ಮನೆಯಲ್ಲಿ ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಾಕ್ಡೌನ್ ಹಿನ್ನೆಲೆ ಮನೆಯಲ್ಲಿದ್ದ ನಟಿ ಸುರೇಖಾ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಭರತನಾಟ್ಯ ಹಾಗೂ ಕುಚಿಪುಡಿ ನೃತ್ಯ ಕಲಾವಿದೆಯಾಗಿ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ನೀಡಿದ್ದರು.
ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನ ಬಹು ಬೇಡಿಕೆಯ ನಟಿಯಾಗಿದ್ದ ಸುರೇಖಾ ಅವರು, ಡಾ.ರಾಜ್ ಕುಮಾರ್ ಅವರ ಹಲವು ಸಿನಿಮಾಗಳಲ್ಲಿಯೂ ಬಣ್ಣ ಹಚ್ಚಿದ್ದರು. ತ್ರಿಮೂರ್ತಿ, ಗಿರಿಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಆಪರೇಷನ್ ಜಾಕ್ ಪಾಟ್ನಲ್ಲಿ ಸಿಐಡಿ 999, ಹುಲಿಯ ಹಾಲಿನ ಮೇವು, ಶಿವಕನ್ಯೆ, ನಾಗರಹೊಳೆ, ತಾಯಿದೇವರು, ಭಕ್ತ ಸಿರಿಯಾಳ, ಕೆಸರಿನ ಕಮಲ ಸೇರಿದಂತೆ ಸುಮಾರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.