ಕರ್ನಾಟಕ

karnataka

ETV Bharat / sitara

ಕನ್ನಡದಲ್ಲಿ ಬರುತ್ತೆ ವಿಜಯ್ ದೇವರಕೊಂಡ ಸಿನಿಮಾ.. ಪುರಿ ಜಗನ್ನಾಥ್ ಡೈರೆಕ್ಟರ್‌.. - ಕನ್ನಡದಲ್ಲಿ ಪುರಿ ಜಗನ್ನಾಥ್​ ಜೊತೆ ವಿಜಯ್ ದೇವರಕೊಂಡ ಸಿನಿಮಾ

ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆಯಾಗಿದೆ. ಚಾರ್ಮಿ ಹಾಗೂ ಇಡೀ ತಂಡದ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ವಂಶಿ ಪಡಿಪೆಲ್ಲಿ, ಜೆಜಿಎಂ ಅದ್ಭುತ ಕಥೆಯಾಗಿದ್ದು, ಇದು ಭಾರತೀಯರ ಮನತಟ್ಟುತ್ತದೆ. ವಿಜಯ್, ಪುರಿ, ಚಾರ್ಮಿ ಜೊತೆ ಪ್ರಾಜೆಕ್ಟ್ ಕೆಲಸ‌ ಮಾಡುತ್ತಿರುವುದು ಖುಷಿಕೊಟ್ಟಿದೆ ಎಂದರು..

JGM MOVIE
'ಜೆಜಿಎಂ' ಸಿನಿಮಾ

By

Published : Mar 29, 2022, 4:51 PM IST

ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್​ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ 'ಜೆಜಿಎಂ' ಎಂಬ ಆ್ಯಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು ಮುಂಬೈನಲ್ಲಿ ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಜನಗಣಮನ ಸಿನಿಮಾಗೆ ಮುನ್ನುಡಿ ಬರೆಯಲಾಯಿತು.

ವಿಜಯ್ ದೇವರಕೊಂಡ

ಜೆಜಿಎಂ ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಡೈಲಾಗ್ ಬರೆದು ಆ್ಯಕ್ಷನ್-ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿ ಚಾರ್ಮಿ ಕೌರ್, ವಂಶಿ ಪಡಿಪೆಲ್ಲಿ ಬಂಡವಾಳ ಹೂಡುತ್ತಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ.

ನಮ್ಮ ಮುಂದಿನ ಸಿನಿಮಾ ಜೆಜಿಎಂ ಬಗ್ಗೆ ಮಾಹಿತಿ ಹಂಚಿಕೊಂಡಿರುವುದು ಖುಷಿಯಾಗ್ತಿದೆ. ವಿಜಯ್ ಜೊತೆ ಮತ್ತೆ ಕೈ ಜೋಡಿಸಿದ್ದೇನೆ. ಇದು ಪಕ್ಕಾ ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾವಾಗಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು. ವಿಜಯ್ ದೇವರಕೊಂಡ, ಪುರಿ ಪ್ರಾಜೆಕ್ಟ್ ಭಾಗವಾಗಿರುವುದು ಖುಷಿಯಾಗಿದೆ.

ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆಯಾಗಿದೆ. ಚಾರ್ಮಿ ಹಾಗೂ ಇಡೀ ತಂಡದ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ವಂಶಿ ಪಡಿಪೆಲ್ಲಿ, ಜೆಜಿಎಂ ಅದ್ಭುತ ಕಥೆಯಾಗಿದ್ದು, ಇದು ಭಾರತೀಯರ ಮನತಟ್ಟುತ್ತದೆ. ವಿಜಯ್, ಪುರಿ, ಚಾರ್ಮಿ ಜೊತೆ ಪ್ರಾಜೆಕ್ಟ್ ಕೆಲಸ‌ ಮಾಡುತ್ತಿರುವುದು ಖುಷಿಕೊಟ್ಟಿದೆ ಎಂದರು.

ವಿದೇಶದ ನಾನಾ ಭಾಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ಹಾಕಿದ್ದು, ಏಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆ್ಯಕ್ಷನ್ ಎಂಟರ್‌ಟೈನರ್ ಕಥಾನಕ ಹೊಂದಿರುವ ಜೆಜಿಎಂ ಸಿನಿಮಾ ಆಗಸ್ಟ್ 3, 2023ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ.

ಓದಿ:ಬಾದಾಮಿಯಲ್ಲಿ ನಿರ್ದೇಶಕ ಯೋಗರಾಜ್ ಭಟ್ಟರ 'ಗರಡಿ' ಸಿನಿಮಾ ಚಿತ್ರೀಕರಣ

ABOUT THE AUTHOR

...view details