ಮುಂಬೈ (ಮಹಾರಾಷ್ಟ್ರ): 'ಗೀತ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿರುವ ಇವರು ಮುಂಬೈನ ರೆಸ್ಟೋರೆಂಟ್ವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್ನಲ್ಲಿ ಭೋಜನ ಸವಿದು ಹೊರಬರುತ್ತಿರುವ ಇವರು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ. ವಿಜಯ್ ದೇವರಕೊಂಡ ಟೈಗರ್ ಪ್ರಿಂಟ್ ಟಿ-ಶರ್ಟ್ ಧರಿಸಿದ್ದರೆ, ಕಪ್ಪು ಬಟ್ಟೆಯಲ್ಲಿ ರಶ್ಮಿಕಾ ಸಖತ್ ಆಗಿ ಕಾಣುತ್ತಿದ್ದರು. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.