ಕಿಚ್ಚ ಸುದೀಪ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ 'ವಿಕ್ರಾಂತ್ ರೋಣ' ಚಿತ್ರ ಬಿಡುಗಡೆ ಯಾವಾಗ ಅಂತಾ ಕಾಯುತ್ತಿದ್ದ ಫ್ಯಾನ್ಸ್ಗೆ ಸಿಹಿ ಸುದ್ದಿ ಸಿಕ್ಕಿದೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಚಿತ್ರದ ಆರ್ಭಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ಆಗಸ್ಟ್ 19ರಂದು ಬಹುನಿರೀಕ್ಷಿತ ಚಿತ್ರವು ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಅಂತ ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೊನಾ ಲಾಕ್ಡೌನ್ ಸಾಧ್ಯತೆ ಹಾಗೂ ಚಿತ್ರಮಂದಿರದ ಶೇ.50ರಷ್ಟು ಮಾತ್ರ ಅವಕಾಶವಿರುವ ನಡುವೆಯೂ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಕನ್ನಡ ಸಿನಿರಂಗದ ಇತಿಹಾಸದಲ್ಲೇ ಮೊದಲ ZOMBIE ಸಿನಿಮಾ!
'ವಿಕ್ರಾಂತ್ ರೋಣ'ಗೆ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿನಿಮಾದ ಟೈಟಲ್ ಪೋಸ್ಟರ್ ಲಾಂಚ್ ಮಾಡಲಾಗಿತ್ತು. ಕಿಚ್ಚ, ವಿಕ್ರಾಂತ್ ರೋಣನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ನಿರೂಪ್ ಭಂಡಾರಿ, ನೀತು ಅಶೋಕ್, ಶ್ರದ್ಧಾ ಶ್ರೀನಾಥ್ ಸೇರಿ ದೊಡ್ಡ ಕಲಾವಿದರ ಬಳಗ ಈ ಚಿತ್ರದಲ್ಲಿದ್ದಾರೆ
ನಿರ್ಮಾಪಕ ಜಾಕ್ ಮಂಜು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ, 3ಡಿ ವರ್ಷನ್ ಕೂಡ ಬರುತ್ತಿರುವುದು ಮತ್ತೊಂದು ವಿಶೇಷವಾಗಿದೆ.
ಇದನ್ನೂ ಓದಿ:'ನಮ್ಮ ವಿದ್ಯಾರ್ಥಿಗಳಿಗೆ ಸವಾರಿ'..ಸೈಕಲ್ ಏರಿ ಸಿನಿಮಾ ಶೂಟಿಂಗ್ಗೆ ಬಂದ ಸೋನು ಸೂದ್!