ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪಾರು ಧಾರಾವಾಹಿಯಲ್ಲಿ ಅರಸನಕೋಟೆ ಅಖಿಲಾಂಡೇಶ್ವರಿ ಆಗಿ ನಟಿಸಿ ಕಿರುತೆರೆ ವೀಕ್ಷಕರ ಗಮನ ಸೆಳೆದಿರುವ ವಿನಯ ಪ್ರಸಾದ್, ಸದ್ಯ ಕಿರುತೆರೆಯಲ್ಲಿ ಬ್ಯುಸಿ. ಲಾಕ್ ಡೌನ್ ನಂತರ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಶೂಟಿಂಗ್ ಆರಂಭವಾಗಿದ್ದು, ವಿನಯ ಪ್ರಸಾದ್ ಕೂಡಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ.
ಇದರ ಜೊತೆಗೆ, ಜನತೆಯ ಜೊತೆಗೆ ಜಾಗರೂಕರಾಗಿರಿ ಎಂದು ಮನವಿ ಮಾಡಿರುವ ಅವರು, ಯಾವೆಲ್ಲಾ ರೀತಿಯಲ್ಲಿ ಜಾಗರೂಕರಾಗಿರಬಹುದು ಎಂದು ಕೂಡಾ ವಿವರಿಸಿದ್ದಾರೆ. ವಿನಯ ಪ್ರಸಾದ್ ಅವರ ಮಗಳು ಪ್ರಥಮಾ ಪ್ರಸಾದ್ ಈ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.