ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಸರ್ಕಾರ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿವಿಧ ಇಲಾಖೆಗಳ ಜೊತೆಗೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಅದೇ ರೀತಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುವ ಮುಖ್ಯ ಸಂಸ್ಥೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು, ಕೆಲ ನಿರ್ಮಾಪಕರು, ನಿರ್ದೇಶಕರು, ಫಿಲ್ಮ್ ಚೇಂಬರ್ ಪದಾಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಾಗಿದೆ.
ಈ ವರ್ಷದ ಬಜೆಟ್ ನಿರೀಕ್ಷೆ ಏನು ಎಂಬುದರ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ಈಟಿವಿ ಭಾರತ ಜೊತೆಗೆ ಮಾತನಾಡಿದ್ದು, ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರನಗರಿ ನಿರ್ಮಾಣದ ಬೇಡಿಕೆಯು ಮುಖ್ಯವಾಗಿ ಬಜೆಟ್ನಲ್ಲಿ ಹೆಚ್ಚು ಗಮನ ಸೆಳೆಯುವ ವಿಷಯವಾಗಿದ್ದು, ಈ ವರ್ಷ ಕೂಡ ಇದರ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ ಎಂದು ಜಯರಾಜ್ ಹೇಳಿದರು.