ಟೀಸರ್‌ನಿಂದಲೇ ವಿಶ್ವದಾಖಲೆ ನಿರ್ಮಿಸಿರುವ ಕನ್ನಡ ಸಿನಿಮಾ 'ಕೆಜಿಎಫ್ ಚಾಪ್ಟರ್-2' ಭಾರತೀಯ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಧೂಳೀಪಟ ಮಾಡಿದ್ದು, ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ. ಈ ಮಧ್ಯೆ ಚಿತ್ರತಂಡ ಹೊಸ ಅಪ್ಡೇಟ್ ನೀಡಿದೆ.
ಕೆಜಿಎಫ್ 2 ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಜೀ ವಾಹಿನಿ ಯಶಸ್ವಿಯಾಗಿದೆ. ಚಿತ್ರದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸ್ಯಾಟ್ಲೈಟ್ ಹಕ್ಕುಗಳನ್ನು ವಾಹಿನಿ ಪಡೆದುಕೊಂಡಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಕೆಜಿಎಫ್-2 ಜೀ ಸಿನಿಮಾ ವಾಹಿನಿಯಲ್ಲಿ ಧೂಳ್ ಎಬ್ಬಿಸಲಿದೆ.