ಹೈದರಾಬಾದ್ (ತೆಲಂಗಾಣ): ಬಾಲಿವುಡ್ ಸೆಲೆಬ್ರಿಟಿ ಕಪಲ್ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಇಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಜೋಡಿ ಇಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿರುವ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾದಲ್ಲಿ ವಿವಾಹವಾಗುತ್ತಿದ್ದಾರೆ.
ವಿಕ್ಕಿ ಕೌಶಲ್ ಕತ್ರಿನಾ ಕೈಫ್ ವಿವಾಹ : ಮದುವೆ ಕುರಿತಾದ ಯಾವುದೇ ಮಾಹಿತಿ ಸೋರಿಕೆ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಈ ಜೋಡಿಯ ಆಪ್ತರು ಈ ಸುಂದರ ಕ್ಷಣದಲ್ಲಿ ಭಾಗಿಯಾಗಿದ್ದಾರೆ. ಆದ್ರೆ ಬಾಲಿವುಡ್ ನಟಿ ದೀಪಿಕಾ ಪಡಿಕೋಣೆ ವರ್ತನೆ ಮಾತ್ರ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಹೌದು, ನಟಿ ದೀಪಿಕಾ ಪಡುಕೋಣೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ತನ್ನ ಮದುವೆಯ ಫೋಟೋಗಳನ್ನು ಡಿಲಿಟ್ ಮಾಡಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದಾರೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರ ಅದ್ಧೂರಿ ಮದುವೆ ಸಕತ್ ಸೌಂಡ್ ಮಾಡ್ತಿದ್ದು, ಈ ವೇಳೆ ದೀಪಿಕಾ ಪಡುಕೋಣೆ ತಮ್ಮ ಮದುವೆ ಸುಂದರ ಕ್ಷಣಗಳ ಚಿತ್ರಗಳನ್ನು, 2018ರಲ್ಲಿ ವಿವಾಹ ಆಗುತ್ತಿರುವುದಾಗಿ ಘೋಷಣೆ ಮಾಡಿದ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.