ಬಾಲಿವುಡ್ ನಟ ನಟಿಯರ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸದ್ದು ಮಾಡುತ್ತಲೇ ಇರುತ್ತದೆ. ಇದೀಗ ನಟ ಸಲ್ಮಾನ್ ಖಾನ್ ಡ್ಯಾನ್ಸ್ ವಿಡಿಯೋ ಕೂಡ ಸಾಮಾಜಿಕ ಜಾಲಾತಾಣದಲ್ಲಿ ಸಖತ್ ವೈರಲ್ ಆಗಿ ಸದ್ದು ಮಾಡುತ್ತಿದೆ.
ಹೌದು, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸದ್ಯ ಟರ್ಕಿಯಲ್ಲಿ ತಮ್ಮ ಮುಂಬರುವ 'ಟೈಗರ್ 3' ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ತಮ್ಮ ಪಾಪ್ಯುಲರ್ ಸಾಂಗ್ "ಜೀನೆ ಕೆ ಹೈ ಚಾರ್ ದಿನ್" ಗೆ ಸಖತ್ ಸ್ಟೆಪ್ ಹಾಕಿದ್ದು, ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.