ಮುಂಬೈ: ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಸೂರ್ಯವಂಶಿ' ದೀಪಾವಳಿಯಲ್ಲಿ ಬಿಡುಗಡೆಯಾಗುತ್ತಿಲ್ಲ ಎಂದು ರಿಲಯನ್ಸ್ ಎಂಟರ್‌ಟೈನ್‌ಮೆಂಟ್ ಗ್ರೂಪ್ ಸಿಇಒ ಸಿಬಾಶಿಶ್ ಸರ್ಕಾರ್ ತಿಳಿಸಿದ್ದಾರೆ.
ರೋಹಿತ್ ಶೆಟ್ಟಿ ನಿರ್ದೇಶನದ 'ಸೂರ್ಯವಂಶಿ' ಸಿನಿಮಾ ಮಾರ್ಚ್ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಕೊರೊನಾ ಹಿನ್ನೆಲೆ ದೀಪಾವಳಿಯಂದು ಸಹ ಸಿನಿಮಾ ಬಿಡುಗಡೆ ಮಾಡಲು ಪ್ರಾಯೋಗಿಕವಾಗಿ ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರ್ ಹೇಳಿದ್ದಾರೆ. ಇದು ಸಿನಿಮಾ ನೋಡಲು ತುದಿಗಾಲಿನಲ್ಲಿ ಕಾಯುತ್ತಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಶೆ ಮೂಡಿಸಿದೆ.