ತೆಲುಗಿನ ಜನಪ್ರಿಯ ಧಾರಾವಾಹಿ 'ಸಾವಿತ್ರಮ್ಮ ಗಾರಿ ಅಬ್ಬಾಯಿ' ಇದೀಗ ಕನ್ನಡಕ್ಕೆ ಡಬ್ ಆಗುತ್ತಿರುವ ವಿಚಾರ ಕಿರುತೆರೆ ಪ್ರಿಯರಿಗೆ ತಿಳಿದೇ ಇದೆ. "ಸನ್ ಆಫ್ ಸಾವಿತ್ರಮ್ಮ" ಹೆಸರಿನಲ್ಲಿ ಕನ್ನಡಕ್ಕೆ ಡಬ್ ಆಗಿರುವ ಈ ಧಾರಾವಾಹಿ ಇಂದಿನಿಂದ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಸೋಮವಾರ ದಿಂದ ಶುಕ್ರವಾರದ ವರೆಗೆ ಪ್ರತಿ ಮಧ್ಯಾಹ್ನ 2 ಗಂಟೆಗೆ ಪ್ರಸಾರವಾಗಲಿರುವ ಈ ಧಾರಾವಾಹಿಯಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟ ಚಂದನ್ ಕುಮಾರ್, ನಾಯಕ ಬಾಲರಾಜ್ ಆಗಿ ಕಾಣಿಸಿಕೊಂಡಿದ್ದಾರೆ. ಚಂದನ್ ತಮ್ಮ ಸೀರಿಯಲ್ ಕೆರಿಯರ್ನಲ್ಲಿ ಇದೇ ಮೊದಲ ಬಾರಿಗೆ ರೆಸ್ಲರ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.