ಚಿತ್ರಮಂದಿರಗಳ ಮಾಲೀಕರ ಸಂಕಷ್ಟಕ್ಕೆ ಮಿಡಿದ ರಾಜ್ಯ ಸರ್ಕಾರ 2021-2022ನೇ ಸಾಲಿನ ಚಿತ್ರಮಂದಿರಗಳ ಆಸ್ತಿ ತೆರಿಗೆ ಮನ್ನಾ ಮಾಡಿ ಆದೇಶ ಹೊರಡಿಸಿದೆ. ಕೊರೊನಾದಿಂದಾಗಿ ಕಳೆದ ಎರಡೂವರೆ ತಿಂಗಳಿಂದ ಕನ್ನಡ ಚಿತ್ರರಂಗ ಸಂಪೂರ್ಣ ಲಾಕ್ಡೌನ್ ಆಗಿತ್ತು.
ಥಿಯೇಟರ್ ಮಾಲೀಕರಿಗೆ ಗುಡ್ ನ್ಯೂಸ್ : ಒಂದು ವರ್ಷದ ಆಸ್ತಿ ತೆರಿಗೆ ಮನ್ನಾ - 2021-2022 Theaters Tax Waiver
ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ ಸಿಂಗಲ್ ಸ್ಕ್ರೀನ್ ಮಾಲೀಕರು ಸ್ವಲ್ಪ ಮಟ್ಟಿಗೆ ನೆಮ್ಮದಿಯಿಂದ ನಿಟ್ಟುಸಿರು ಬಿಟ್ಟಿದ್ದಾರೆ..
ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ, ಚಿತ್ರಮಂದಿರಗಳನ್ನು ಬಿಟ್ಟು ಬೇರೆ ಉದ್ಯಮಗಳು ತೆರೆಯಲು ಅನುಮತಿ ನೀಡಿತ್ತು. ಈ ಹಿನ್ನೆಲೆ ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರಮಂದಿರಗಳು ತೆರೆಯಲು ಅನುಮತಿ ನೀಡುವಂತೆ ಮತ್ತು ಥಿಯೇಟರ್ ತೆರಿಗೆ ವಿನಾಯಿತಿ ಮಾಡುವಂತೆ ಮನವಿ ಸಲ್ಲಿಸಿತ್ತು.
ಚಿತ್ರಮಂದಿರಗಳ ಮಾಲೀಕರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಇಂದು 2021-2022ನೇ ಸಾಲಿನ ಚಿತ್ರಮಂದಿರಗಳ ಆಸ್ತಿ ತೆರಿಗೆ ಮನ್ನಾ ಮಾಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಸಿಂಗಲ್ ಸ್ಕ್ರೀನ್ ಮಾಲೀಕರು ಸ್ವಲ್ಪ ಮಟ್ಟಿಗೆ ನೆಮ್ಮದಿಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.