ಮುಂಬೈ: ಜನಪ್ರಿಯ ಮನರಂಜನೆ ಕಪಿಲ್ ಶರ್ಮಾ ಶೋನಲ್ಲಿ ಎರಡನೇ ಬಾರಿಗೆ ಕನ್ನಡದ ನಟ ಸುದೀಪ್ ಕಾಣಿಸಿಕೊಂಡಿದ್ದಾರೆ.
ಕಪಿಲ್ ಶರ್ಮಾ ಶೋನಲ್ಲಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ನಲ್ಲ - ನಲ್ಲ
ಪೈಲ್ವಾನ್ ಚಿತ್ರದ ಪ್ರಮೋಷನ್ಗಾಗಿ ನಟ ಸುದೀಪ್ ಕಪಿಲ್ ಶರ್ಮಾ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಹಾಜರಿರುವ ಶೋ ಚಿತ್ರೀಕರಣಗೊಂಡಿದ್ದು, ಇದೇ ಶನಿವಾರ ಹಾಗೂ ಭಾನುವಾರ ಸೋನಿ ಟಿವಿಯಲ್ಲಿ ಪ್ರಸಾರಗೊಳ್ಳಲಿದೆ.
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೈಲ್ವಾನ್ ರಿಲೀಸ್ಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಇದೀಗ ಪೈಲ್ವಾನ್ ತಂಡ ಕಪಿಲ್ ಶರ್ಮಾ ಶೋನಲ್ಲಿ ಹಾಜರಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಾಲಿವುಡ್ ನಟ ಸುನೀಲ್ ಶೆಟ್ಟಿ ಹಾಜರಿರುವ ಈ ಶೋ ನಾಳೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಇದರ ಮತ್ತೊಂದು ಪ್ರೋಮೊ ವಿಡಿಯೋ ಸದ್ಯ ರಿಲೀಸ್ ಆಗಿದೆ.
ಹೆಬ್ಬುಲಿ ಖ್ಯಾತಿಯ ಕೃಷ್ಣಪ್ಪ ಆ್ಯಕ್ಷನ್ ಕಟ್ ಹೇಳಿರುವ ಪೈಲ್ವಾನ್ ಸಿನಿಮಾದಲ್ಲಿ ಸುದೀಪ್ ಕುಸ್ತಿಪಟು, ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಆಕಾಂಕ್ಷಾ ಸಿಂಗ್ ಪೈಲ್ವಾನ್ ಜತೆ ರೊಮ್ಯಾನ್ಸ್ ಮಾಡಿದ್ದಾರೆ. ಸೆಪ್ಟೆಂಬರ್ 12 ರಂದು ಈ ಸಿನಿಮಾ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.