ನಟಿ ಸುಪ್ರಿತಾ ಸತ್ಯನಾರಾಯಣ ಚಿತ್ರೀಕರಣದಿಂದ ಬ್ರೇಕ್ ಪಡೆದು ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಪ್ರಕೃತಿಯ ನಡುವೆ ಕಾಲ ಕಳೆಯುತ್ತಿದ್ದಾರೆ. ಸುಪ್ರಿತಾ ಕೇರಳದ ಸಮುದ್ರ ತೀರದಲ್ಲಿ ಸಮಯ ಕಳೆಯುತ್ತಿರುವ ಫೋಟೋವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸೂರ್ಯಾಸ್ತದ ವೇಳೆ ಸುಂದರ ಸಮುದ್ರ ತೀರದಲ್ಲಿ ನಿಂತಿರುವ ಫೋಟೋವನ್ನು ಹಂಚಿಕೊಂಡಿರುವ ಸುಪ್ರಿತಾ " ನೊರೆಯು ತಿಳಿ ಹಾಲಿನಂತೆ ಕಾಣುತ್ತಿದೆ.. ಅಲೆಗಳು ಬೂದು ಬಣ್ಣಕ್ಕೆ ತಿರುಗಿದೆ..ಸೂರ್ಯಾಸ್ತದ ಹಿಂದೆ ನನ್ನ ದಾರಿ ಕಾಣುತ್ತಿದೆ" ಎಂದು ಬರೆದುಕೊಂಡಿದ್ದಾರೆ. 'ಸೀತಾ ವಲ್ಲಭ' ಧಾರಾವಾಹಿ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದ ಸುಪ್ರಿತಾ ಸತ್ಯನಾರಾಯಣ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ವೈಯಕ್ತಿಕ ವಿಚಾರ ಹಾಗೂ ಕರಿಯರ್ಗೆ ಸಂಬಂಧಿಸಿದ ವಿಚಾರಗಳು, ಫೋಟೋ, ವಿಡಿಯೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.