ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ 'ಲಕ್ಷ್ಮಿ ಬಾರಮ್ಮ'ದಲ್ಲಿ ನಾಯಕ ಚಂದನ್ ಆಗಿ ಅಭಿನಯಿಸುತ್ತಿರುವ ಚಂದು ಗೌಡ ತಮ್ಮ ಬಹುಕಾಲದ ಗೆಳತಿ ಶಾಲಿನಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಕೋವಿಡ್ ಕಾರಣದಿಂದಾಗಿ ಸರಳವಾಗಿ ಚಂದು ಗೌಡ ಅವರ ವಿವಾಹೋತ್ಸವ ನಡೆದಿದ್ದು, ಕೇವಲ ಕುಟುಂಬಸ್ಥರು ಮತ್ತು ಆಪ್ತರಷ್ಟೇ ಸಂಭ್ರಮದಲ್ಲಿ ಭಾಗಿಯಾಗಿದ್ದರು.
ವೃತ್ತಿಯಲ್ಲಿ ಮಾಡೆಲ್ ಆಗಿರುವ ಶಾಲಿನಿ ಅವರನ್ನು ಚಂದು ಗೌಡ ಭೇಟಿಯಾದದ್ದು ಸ್ನೇಹಿತರ ಮೂಲಕ. ಬಳಿಕ ಸ್ನೇಹ, ಪ್ರೀತಿಯಾಗಿ ಚಿಗುರೊಡೆದಿತ್ತು. ಹೀಗೆ ಕಳೆದ ನಾಲ್ಕು ವರ್ಷಗಳಿಂದ ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದಾರೆ. ಇನ್ನು ಇಬ್ಬರ ಪ್ರೀತಿಗೆ ಎರಡೂ ಮನೆಯವರು ಒಪ್ಪಿಗೆಯ ಮುದ್ರೆ ಒತ್ತಿದ್ದು ಇದೀಗ ಸತಿ ಪತಿಗಳಾಗಿದ್ದಾರೆ.