ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಗಟ್ಟಿಮೇಳ'ದಲ್ಲಿ ಸಾರ್ಥಕ್ ಆಗಿ ಅಭಿನಯಿಸುತ್ತಿರುವ ಗಿರೀಶ್ ಬೆಟ್ಟಪ್ಪ ನಟನಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಸ್ವತಃ ಗಿರೀಶ್ ಅವರೇ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಸತ್ಯಂ ಶಿವಂ ಸುಂದರಂ' ಧಾರಾವಾಹಿಯ ಮೂಲಕ ನಟನಾ ಪಯಣ ಶುರು ಮಾಡಿದ ಗಿರೀಶ್, ಸದ್ಯಕ್ಕೆ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಸತ್ಯಂ ಶಿವಂ ಸುಂದರಂ ಧಾರಾವಾಹಿಯಲ್ಲಿ ಸತ್ಯರಾಜ್ ಅರಸ್ ಆಗಿ ನಟಿಸುವ ಮೂಲಕ ಬಣ್ಣದ ಪಯಣ ಶುರು ಮಾಡಿರುವ ಅವರು, ಸದ್ಯಕ್ಕೆ ಸಾರ್ಥಕ್ ಪಾತ್ರದ ಮೂಲಕ ಮನೆಮಾತಾಗಿದ್ದಾರೆ.