ನವರಸ ನಾಯಕ ಜಗ್ಗೇಶ್ ಅವರ ಎರಡನೇ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ಅಪಘಾತಕ್ಕೊಳಗಾಗಿದೆ. ಈ ದುರ್ಘಟನೆ ಕುರಿತು ಜಗ್ಗೇಶ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲಾ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನು ಪ್ರತಿ ಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.