ಕರ್ನಾಟಕ

karnataka

ETV Bharat / sitara

ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿದ ನಿಖಿಲ್ ಕುಮಾರಸ್ವಾಮಿ - ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿದ ನಿಖಿಲ್ ಕುಮಾರಸ್ವಾಮಿ

ಮಂಜು ಅಥರ್ವ, ನಿಖಿಲ್‌ ಅವರ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಿಖಿಲ್ ಹಾಗೂ ಮಂಜು ಅಥರ್ವ ಕಾಂಬೋದಲ್ಲಿ ಮೂಡಿ ಬತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಶುರುವಾಗಿದೆ.

manju atharva director nikhil kumaraswamy new film
ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿದ ನಿಖಿಲ್ ಕುಮಾರಸ್ವಾಮಿ

By

Published : Jan 15, 2022, 12:43 PM IST

ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್, ಸದ್ಯ ಸಂಕ್ರಾಂತಿ ಹಬ್ಬಕ್ಕೆ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ.

ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿದ ನಿಖಿಲ್ ಕುಮಾರಸ್ವಾಮಿ

ಕಳೆದ 7 ವರ್ಷಗಳಿಂದ ಚಿತ್ರರಂಗದಲ್ಲಿರುವ ಮಂಜು ಅಥರ್ವ, ತಮಿಳಿನ ಕದಿರನ್‌ ಜತೆ ಕೆಲಸ ಮಾಡಿದ್ದಾರೆ. ಮಾಸ್ಟರ್‌ ಪೀಸ್‌, ಮಫ್ತಿ ಸಿನಿಮಾಗಳಿಗೆ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ 'ಪ್ರೇಮಂ ಪೂಜ್ಯಂ' ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್‌ ಅವರ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಿಖಿಲ್ ಹಾಗೂ ಮಂಜು ಅಥರ್ವ ಕಾಂಬೋದಲ್ಲಿ ಮೂಡಿ ಬತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದ್ದ, ಈ ಬಗ್ಗೆ ಚಿತ್ರತಂಡ ಅಪ್ಡೇಟ್​ ನೀಡಿದೆ.‌

ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿದ ನಿಖಿಲ್ ಕುಮಾರಸ್ವಾಮಿ

ಪಕ್ಕ ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಈ ಚಿತ್ರಕ್ಕೆ ಸದ್ಯಕ್ಕೆ ಟೈಟಲ್ ಫಿಕ್ಸ್ ಆಗಿಲ್ಲ. ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿ ಅದ್ಧೂರಿಯಾಗಿ ಮೂಡಿ ಬರುತ್ತಿರುವ ಈ ಸಿನಿಮಾಗೆ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, ಮಫ್ತಿ, ಮದಗಜ ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ನೀಡಿರುವ ಚಿತ್ರತಂಡ ಸದ್ಯದಲ್ಲಿಯೇ ಟೈಟಲ್ ಜೊತೆಗೆ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

ಇದನ್ನೂ ಓದಿ:ರೈಡರ್ ಸಿನಿಮಾ ಪೈರಸಿ: ಭಾವುಕರಾದ ನಿಖಿಲ್ ಕುಮಾರಸ್ವಾಮಿ

ABOUT THE AUTHOR

...view details