ಸಿನಿಮಾ ಪೋಸ್ಟರ್ಗಳನ್ನ ಬ್ಯಾನ್ ಮಾಡಿದ್ದರಿಂದ ನೂರಾರು ಕಾರ್ಮಿಕರು ಕೆಲಸವಿಲ್ಲದೇ ಬೀದಿಗೆ ಬಂದಿದ್ದಾರೆ. ಕಳೆದ ಒಂದು ವರ್ಷದಿಂದ ಕೆಲಸವಿಲ್ಲ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಾಯದಿಂದ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿತ್ತು.ಇದೀಗ ಈ ಸಮಸ್ಯೆಯನ್ನು ಬಗೆ ಹರಿಸುವಂತೆ ಕನ್ನಡ ಚಲನಚಿತ್ರರಂಗದ ಜಾಹೀರಾತು ಅಧ್ಯಕ್ಷ ರವೀಂದ್ರನಾಥ್ ಹಾಗೂ ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ನೇತೃತ್ವದಲ್ಲಿ ಸರ್ಕಾರದ ಜತೆ ಚರ್ಚಿಸಿ ಪರಿಹಾರ ಕೊಡಿಸಬೇಕು ಎಂದು ನಟ ಶಿವರಾಜಕುಮಾರ್ಗೆ ಪತ್ರದ ಮುಖೇನ ಮನವಿ ಮಾಡಿಕೊಂಡರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಶಿವರಾಜಕುಮಾರ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಈಗಾಗಲೇ ತಾವು ಚರ್ಚಿಸಿರುವುದಾಗಿ ತಿಳಿಸಿದರು. ಇದೀಗ ಇನ್ನೊಮ್ಮೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ. ಕಾರ್ಮಿಕರಿಗೆ ಈ ಬಾರಿ ಒಂದು ದಾರಿ ಮಾಡಿಕೊಡುವ ಪ್ರಯತ್ನ ಮಾಡುವೆ ಎಂದು ಶಿವಣ್ಣ ಈ ವೇಳೆ ಭರವಸೆ ನೀಡಿದರು.