ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟು ಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಯುವರಾಜ ಈಗ ಯುದುವೀರ :ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರಸ್ವಾಮಿ 5ನೇ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾಕ್ಕೆ 'ಯದುವೀರ' ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ಕೂಡ ಅನಾವರಣ ಮಾಡಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
'ಯದುವೀರ' ಚಿತ್ರವನ್ನು ಮಂಜು ಅಥರ್ವ ನಿರ್ದೇಶಿಸುತ್ತಿದ್ದಾರೆ. ಕಳೆದ 7 ವರ್ಷಗಳಿಂದ ಮಂಜು ಚಿತ್ರರಂಗದಲ್ಲಿದ್ದಾರೆ. ಯಶ್ ನಟನೆಯ 'ಮಾಸ್ಟರ್ ಪೀಸ್', ಶಿವರಾಜ್ಕುಮಾರ್ ಅಭಿನಯದ 'ಮಫ್ತಿ' ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್ ಅವರ 25ನೇ ಸಿನಿಮಾ 'ಪ್ರೇಮಂ ಪೂಜ್ಯಂ' ಸಿನಿಮಾಗೆ ಕೋ-ಡೈರೆಕ್ಟರ್ ಕೂಡ ಆಗಿದ್ದರು.