ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನಾಗಿ ಮಾತ್ರವಲ್ಲ, ಗಾಯಕರಾಗಿ, ನಿರೂಪಕರಾಗಿ, ನಿರ್ಮಾಪಕರಾಗಿ ಕೂಡಾ ಹೆಸರು ಮಾಡಿದ್ದಾರೆ. ತಮ್ಮ ಪಿಆರ್ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾಗಳನ್ನು ನಿರ್ಮಿಸಿರುವ ಪುನೀತ್ ಈಗ ಪೂರ್ಣಿಮಾ ಪ್ರೊಡಕ್ಷನ್ಸ್ ಬ್ಯಾನರ್ ವತಿಯಿಂದ ಕಿರುತೆರೆಯಲ್ಲಿ ಹೊಸ ಪ್ರಾಜೆಕ್ಟ್ ಆರಂಭಿಸುತ್ತಿದ್ದಾರೆ.
ಪುನೀತ್ ರಾಜ್ಕುಮಾರ್ ನಿರ್ಮಿಸುತ್ತಿರುವ ಧಾರಾವಾಹಿಗೆ 'ನೇತ್ರಾವತಿ' ಎಂದು ಶೀರ್ಷಿಕೆ ಇಡಲಾಗಿದೆ. ಇದರ ಪ್ರೋಮೋವನ್ನು ಉದಯ ಟಿವಿ ಬಿಡುಗಡೆಮಾಡಿದೆ. ಇದೊಂದು ಭಕ್ತಿ ಪ್ರಧಾನ ಧಾರಾವಾಹಿಯಾಗಿದ್ದು, ಧಾರಾವಾಹಿ ಕಲಾವಿದರ ಬಗ್ಗೆ ಯಾವುದೇ ವಿಚಾರವನ್ನು ಬಹಿರಂಗಗೊಳಿಸಿಲ್ಲ. "ಪೂರ್ಣಿಮಾ ಪ್ರೊಡಕ್ಷನ್ಸ್ ಬ್ಯಾನರ್ ವತಿಯಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ಪ್ರಾರಂಭವಾಗುತ್ತಿದ್ದು ಇದೊಂದು ಭಕ್ತಿ ಪ್ರಧಾನ ಕಥೆಯಾಗಿದೆ ಎಂದು ಪುನೀತ್ ರಾಜಕುಮಾರ್ ತಿಳಿಸಿದ್ದಾರೆ. ಶೀಘ್ರವೇ ಈ ಧಾರಾವಾಹಿ ಉದಯ ವಾಹಿನಿಯಲ್ಲಿ ಪ್ರಸಾರವಾಗಲಿದೆ. 'ನೇತ್ರಾವತಿ' ಧಾರಾವಾಹಿಯನ್ನು ಸಂತೋಷ್ ಗೌಡ ನಿರ್ದೇಶಿಸುತ್ತಿದ್ದಾರೆ. ಪೂರ್ಣಿಮಾ ಪ್ರೊಡಕ್ಷನ್ಸ್ ಬ್ಯಾನರ್ನಿಂದ ಉದಯವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮೊದಲ ಧಾರಾವಾಹಿ ಇದಾಗಿದೆ.