ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ಅಭಿನಯದ ಎರಡನೇ ಚಿತ್ರ 'ಬ್ಯಾಡ್ ಮ್ಯಾನರ್ಸ್' ಕಳೆದ ತಿಂಗಳು ಪ್ರಾರಂಭವಾಗಿ ಮಂಡ್ಯದಲ್ಲಿ ಒಂದು ಹಂತದ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಲೆಟೆಸ್ಟ್ ಅಪ್ಡೇಟ್ ಅಂದ್ರೆ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಹೌದು, ಒಂದು ಹಂತದ ಚಿತ್ರೀಕರಣ ಮುಗಿಸಿರುವ 'ಬ್ಯಾಡ್ ಮ್ಯಾನರ್ಸ್' ಎರಡನೇ ಹಂತದ ಚಿತ್ರೀಕರಣವನ್ನು ಸದ್ಯದಲ್ಲೇ ಪ್ರಾರಂಭಿಸಲಿದೆ. ಇದುವರೆಗೆ ಚಿತ್ರದಲ್ಲಿ ಅಭಿಷೇಕ್ ನಟಿಸುತ್ತಿರುವುದನ್ನು ಬಿಟ್ಟರೆ ಮಿಕ್ಕಂತೆ ಯಾವ ಕಲಾವಿದರು ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ ಎಂದು ಬಹಿರಂಗಪಡಿಸಿರಲಿಲ್ಲ. ಆದರೆ ಇದೀಗ ಚಿತ್ರದಲ್ಲಿ ಚಿತ್ರದಲ್ಲಿ ನಾಯಕಿಯರಾಗಿ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.