ಬೆಂಗಳೂರು: ಸ್ಯಾಂಡಲ್ವುಡ್ನ ನಟ ಕಂ ನಿರ್ಮಾಪಕನೊಬ್ಬ ಹಿರಿತೆರೆಯ ಸಹ ನಟಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
'ಮಿಷನ್ 2023' ಚಿತ್ರದ ನಾಯಕ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಅವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿನಿಮಾಗಳಲ್ಲಿ ಪಾತ್ರ ಮಾಡುತ್ತಿದ್ದ ನಟಿಯೊಬ್ಬರು ಇವರ ವಿರುದ್ಧ ದೂರು ನೀಡಿದ್ದರು. ಸುಮಾರು 2 ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದರು.