ನವದೆಹಲಿ: ಹಾಲಿ ಚಾಂಪಿಯನ್ ಪಿವಿ ಸಿಂಧು ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ಶಿಪ್ನ 2ನೇ ಸುತ್ತಿನ ಪಂದ್ಯದಲ್ಲಿ ಸ್ಲೊವಾಕಿಯಾದ ಮಾರ್ಟಿನಾ ರೆಪಿಸ್ಕಾ ವಿರುದ್ಧ ನೇರ ಗೇಮ್ಗಳ ಅಂತರದಿಂದ ಗೆಲುವು ಸಾಧಿಸಿ ಫ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಮಂಗಳವಾರ ನಡೆದ ಪಂದ್ಯದಲ್ಲಿ ಸಿಂಧು ತನ್ನ ಎದುರಾಳಿಗೆ ಯಾವುದೇ ಅಂತದಲ್ಲಿ ತಿರುಗೇಟು ನೀಡಲು ಅವಕಾಶವನ್ನೇ ನೀಡಲಿಲ್ಲ. ಅವರು 21-7, 21-9ರ ಪ್ರಾಬಲ್ಯಯುತ ಗೆಲುವು ಸಾಧಿಸಿದರು.
ಆಗಸ್ಟ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ನಂತರ ಸಿಂಧು ಹಿಂತಿರುಗಿ ನೋಡೇ ಇಲ್ಲ. ಫ್ರೆಂಚ್ ಓಪನ್, ಇಂಡೋನೆಷ್ಯಾ ಓಪನ್, ಇಂಡೋನೆಷ್ಯಾ ಮಾಸ್ಟರ್ಸ್ ಟೂರ್ನಿಗಳಲ್ಲಿ ಸೆಮಿಫೈನಲ್ಸ್ ಪ್ರವೇಶಿಸಿದ್ದ ಅವರೂ ಕಳೆದ ವಾರ ವಿಶ್ವ ಟೂರ್ ಫೈನಲ್ಸ್ನಲ್ಲಿ ರನ್ನರ್ ಅಪ್ ಆಗಿದ್ದರು. ಇದೀಗ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದು, ಮತ್ತೊಂದು ವಿಶ್ವಚಾಂಪಿಯನ್ಶಿಪ್ ಮೆಡಲ್ ಗೆಲ್ಲುವ ಉತ್ಸಾಹದಲ್ಲಿದ್ದಾರೆ.
ಎರಡು ಒಲಿಂಪಿಕ್ ಪದಕಗಳ ವಿಜೇತೆ ಸಿಂಧು ತಮ್ಮ ಮುಂದಿನ ಪಂದ್ಯದಲ್ಲಿ ಥಾಯ್ಲೆಂಡ್ನ ಪಾರ್ನ್ಪಾವೀ ಚೊಚುವಾಂಗ್ ವಿರುದ್ಧ ಸೆಣಸಾಡಲಿದ್ದಾರೆ.