ನವದೆಹಲಿ: ರ‍್ಯಾಂಕಿಂಗ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಘೋಷಿಸಿದೆ. ಇದರೊಂದಿಗೆ, ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ಭಾರತದ ಕಿಡಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ಆಸೆಗೆ ತಣ್ಣೀರೆರೆಚಿದಂತಾಗಿದೆ.
ಇತ್ತೀಚೆಗಷ್ಟೇ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಅವಕಾಶವಿದ್ದ ಮೂರು ಟೂರ್ನಿಗಳನ್ನು ಕೊರೊನಾ ಕಾರಣದಿಂದ ರದ್ದುಗೊಳಿಸಲಾಗಿತ್ತು. ಹೀಗಾಗಿ ರ‍್ಯಾಂಕಿಂಗ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಈ ಹಿನ್ನೆಲೆ ಕಿಡಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ನಿರೀಕ್ಷೆಯಿಂದ ಕಾಯುತ್ತಿದ್ದರು.
ಟೋಕಿಯೊ ಒಲಿಂಪಿಕ್ಸ್‌ನ ಅರ್ಹತಾ ಅವಧಿ ಜೂನ್ 15ರಂದು ಮುಕ್ತಾಯಗೊಳ್ಳಲಿದೆ. ಆದರೆ, ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯೂ ಇಲ್ಲ. ಆದ್ದರಿಂದ ಒಲಿಂಪಿಕ್ಸ್‌ಗೆ ಈಗಿನ ರ‍್ಯಾಂಕಿಂಗ್ ಪ್ರಕಾರವೇ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ಬಿಡಬ್ಲ್ಯುಎಫ್ (ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್) ತಿಳಿಸಿದೆ.