ಕರ್ನಾಟಕ

karnataka

ETV Bharat / sports

'ಸುವರ್ಣ' ಸಿಂಧು ನಿವಾಸದಲ್ಲಿ ಹಬ್ಬದ ಸಂಭ್ರಮ... ರಾಷ್ಟ್ರಪತಿ, ಪ್ರಧಾನಿಯಿಂದ ಅಭಿನಂದನೆ - World Championships final

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿರುವ ಶಟ್ಲರ್ ಪಿ.ವಿ.ಸಿಂಧುಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

BWF World Championships: Sindhu creates history

By

Published : Aug 25, 2019, 8:41 PM IST

ನವದೆಹಲಿ:ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿರುವ ಶಟ್ಲರ್ ಪಿ.ವಿ.ಸಿಂಧುಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವಾರು ಗಣ್ಯರು ಅಭಿನಂದನೆ ಹೇಳಿದ್ದಾರೆ.

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿರುವ ಸಿಂಧು ಅವರ ಹೈದರಾಬಾದ್​​ನ ನಿವಾಸದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಅವರ ತಾಯಿ ಪಿ.ವಿಜಯಾ ಅವರು ತಮ್ಮ ಕುಟುಂಬ ಸದಸ್ಯರಿಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿದ್ದಾರೆ.

ಹೈದರಾಬಾದ್​ನಲ್ಲಿ ಸಿಂಧು ತಾಯಿ ಪಿ.ವಿಜಯಾ ಮಾತನಾಡಿ, ಸಿಂಧು ಈ ಟೂರ್ನಿಗಾಗಿ ಸಾಕಷ್ಟು ಶ್ರಮ ಹಾಕಿದ್ದರು. ಈ ಅದ್ಭುತ ಕ್ಷಣಕ್ಕಾಗಿ ಇಷ್ಟು ದಿನ ಕಾಯುತ್ತಿದ್ದೆವು. ತುಂಬಾ ಸಂತೋಷವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಿಂಧುಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಟ್ವಿಟರ್​ ಮೂಲಕ ಮೋದಿ ಪಿ.ವಿ.ಸಿಂಧು ಅವರ ಯಶಸ್ಸು ಯುವ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದಿದ್ದಾರೆ. ನಿನ್ನ ಕಠಿಣ ಪರಿಶ್ರಮ ಲಕ್ಷಾಂತರ ಮಂದಿಗೆ ಪ್ರೇರೇಪಣೆ ನೀಡುತ್ತದೆ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ, ಆಂಧ್ರದ ಸಿಎಂ ಜಗನ್​ ಮೋಹನ್​ ರೆಡ್ಡಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಸಚಿವ ಪ್ರಕಾಶ್​ ಜಾವಡೇಕರ್​ ಟ್ವಿಟರ್​ ಮೂಲಕ ಶುಭಾಶಯ ಕೋರಿದ್ದಾರೆ.

ABOUT THE AUTHOR

...view details