ಹೈದರಾಬಾದ್: 2016 ರಿಯೋ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ ಸ್ಪೇನ್‌ನ ಕರೋಲಿನಾ ಮರಿನ್ ಮೊಣಕಾಲು ಗಾಯದ ಕಾರಣ ಟೋಕಿಯೋ ಒಲಿಂಪಿಕ್ಸ್ ಕೂಟದಿಂದ ಹಿಂದೆ ಸರಿದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ.
2016ರ ರಿಯೋ ಒಲಿಂಪಿಕ್ಸ್ ಮಹಿಳಾ ವಿಭಾಗದ ಸಿಂಗಲ್ಸ್ ಫೈನಲ್ನಲ್ಲಿ ಮರಿನ್ ಭಾರತದ ಪಿ.ವಿ.ಸಿಂಧು ಅವರನ್ನು ಮಣಿಸಿ ಚಿನ್ನದ ಪದಕ ಗೆದ್ದಿದ್ದರು. ಮೊದಲ ಬಾರಿಗೆ ಚೀನಾ ಪ್ರಾಬಲ್ಯವನ್ನು ಈ ಜೋಡಿ ಹಿಂದಿಕ್ಕಿ ಫೈನಲ್ ಪ್ರವೇಶಿಸಿದ್ದರು.
ಆದರೆ ಎಡ ಮೊಣಕಾಲು ನೋವಿನಿಂದ ಬಳಲುತ್ತಿರುವ ಕಾರಣ ಚಿಕಿತ್ಸೆ ಪಡೆಯುತ್ತಿದ್ದು, ಟೋಕಿಯೋ ಒಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ಮೂರು ಬಾರಿಯ ವಿಶ್ವ ಚಾಂಪಿಯನ್ ಕರೋಲಿನಾ ಮರಿನ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಕಳೆದ ಎರಡು ತಿಂಗಳ ತಯಾರಿ ತುಂಬಾ ಕಷ್ಟಕರವಾಗಿತ್ತು. ಆದರೆ ನಾವೆಲ್ಲರೂ ನಾನು ಒಲಿಂಪಿಕ್ಸ್ ವೇಳೆಗೆ ಉತ್ತಮ ಆಕಾರಕ್ಕೆ ಬರಬಹುದೆಂದು ತಿಳಿದಿದ್ದೆವು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ಮರಿನ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಸುದೀರ್ಘ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ:8 ವರ್ಷಗಳಲ್ಲಿ 4 ಟಿ20 ವಿಶ್ವಕಪ್ ಸೇರಿ 12 ಐಸಿಸಿ ಟೂರ್ನಿ, ತಂಡಗಳಲ್ಲೂ ಏರಿಕೆ