ಜಕಾರ್ತಾ: ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿ ಗುರುವಾರ ನಡೆದ ಸಿಂಗಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶಟ್ಲರ್ ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ.
ಇಂಡೋನೇಷ್ಯಾ ಮಾಸ್ಟರ್ಸ್: ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು - P V Sindhu suffered a quarterfinal defeat
ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿ ಜಪಾನ್‌ನ ಸಯಾಕಾ ತಕಹಶಿ ಅವರ ವಿರುದ್ಧ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶಟ್ಲರ್ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ.
ಜಪಾನ್‌ನ ಸಯಾಕಾ ತಕಹಶಿ ಅವರ ವಿರುದ್ಧದ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಒಂದು ಗಂಟೆ ಆರು ನಿಮಿಷಗಳ ಕಾಲ ಸೆಣಸಾಡಿದ ಸಿಂಧು 21-16, 16-21, 19-21 ಅಂಕಗಳಿಂದ ಸೋಲು ಅನುಭವಿಸಿದ್ದಾರೆ. ಸಯಾಕಾ ತಕಹಶಿ ಇದೇ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೈನಾ ನೆಹ್ವಾಲ್ ಅವರನ್ನು ಸೋಲಿಸಿದ್ದರು.
ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಜಪಾನ್‌ನ ಅಯಾ ಒಹೋರಿ ಅವರನ್ನು 14-21, 21-15, 21-1 ಸೆಟ್‌ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ಪ್ರವೇಶ ಸಾಧಿಸಿದ ಏಕೈಕ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದ ಸಿಂಧು, ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನ ಮುಗಿಸಿದ್ದಾರೆ.