ಬೆಂಗಳೂರು:ಇಲ್ಲಿ ನಡೆದ 2019ನೇ ಇಂಟರ್ ಕ್ಲಬ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತಂಡ ಜಯ ಗಳಿಸಿದೆ.
ಕೆಎಸ್ಸಿಎ ಆಯೋಜನೆ ಮಾಡಿದ್ದ 2019ನೇ ಇಂಟರ್ ಕ್ಲಬ್ ಬ್ಯಾಡ್ಮಿಂಟನ್ ಟೂರ್ನಿಯನ್ನ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಉದ್ಘಾಟನೆ ಮಾಡಿದ್ದರು. ಒಟ್ಟು 12 ತಂಡಗಳು ಪಾಲ್ಗೊಂಡಿದ್ದ ಈ ಟೂರ್ನಿಯಲ್ಲಿ ಅಂತಿಮವಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಫೈನಲ್ ಪ್ರವೆಶಿಸಿದ್ದವು.