ಬ್ಯಾಂಕಾಕ್: ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ನಿರೀಕ್ಷೆ ಮೂಡಿಸಿದ್ದವರು ಫೈನಲ್ ಪ್ರವೇಶಿಸುವಲ್ಲಿ ವಿಫಲರಾದರೂ ಶ್ರೇಯಾಂಕರಹಿತರಾಗಿ ಕಣಕ್ಕಿಳಿದಿದ್ದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿರಾಜ್ ರೆಡ್ಡಿ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಬೀಗಿದ್ದ ಈ ಯುವ ಜೋಡಿ ಇದೇ ಮೊದಲ ಬಾರಿಗೆ ಥಾಯ್ಲೆಂಡ್ ಬ್ಯಾಡ್ಮಿಂಟನ್ ಕೂಟದ ಡಬಲ್ಸ್ ವಿಭಾಗದಲ್ಲಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಚೀನಾದ ಲಿ ಜುನ್ ಹ್ಯೂ ಹಾಗೂ ಲಿಯು ಯೂ ಚೆನ್ ವಿರುದ್ಧ 21-19, 18-21 ಹಾಗೂ 21-18 ಅಂತರದಲ್ಲಿ ಗೆದ್ದು ಡಬಲ್ಸ್ ಚಾಂಪಿಯನ್ ಆಗಿದ್ದಾರೆ.