ಬಾಲಿ(ಇಂಡೋನೇಷ್ಯಾ):ಇಂಡೋನೇಷ್ಯಾದಲ್ಲಿ ಬುಧವಾರದಿಂದ ಆರಂಭವಾಗುವ ಡಬ್ಲ್ಯೂಟಿಎಫ್ ವಿಶ್ವ ಟೂರ್ ಫೈನಲ್ಸ್ನಲ್ಲಿ ಬ್ಯಾಡ್ಮಿಂಟನ್ ತಾರೆ, ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ.
ಇತ್ತೀಚೆಗೆ ಉತ್ತಮ ಪ್ರದರ್ಶನ ತೋರುತ್ತಿರುವ ಲಕ್ಷ್ಯಸೇನ್ ಮತ್ತು ಮಿಶ್ರ ಡಬಲ್ಸ್ನ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ - ಚಿರಾಗ್ ಶೆಟ್ಟಿ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ವರ್ಷದ ಕೊನೆಯ ಪಂದ್ಯಾವಳಿ ಆಗಿರುವ ಡಬ್ಲ್ಯೂಟಿಎಫ್ ವಿಶ್ವ ಟೂರ್ ಫೈನಲ್ಸ್ನಲ್ಲಿ ಭಾರತ ಉತ್ತಮ ಸಾಧನೆ ಮಾಡುವ ಮೂಲಕ 2021 ಅನ್ನು ಮುಗಿಸಲು ಸನ್ನದ್ಧವಾಗಿದೆ.