ಬಾಲಿ(ಇಂಡೋನೇಷಿಯಾ) :ಭಾರತದ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಇಂಡೋನೇಷಿಯಾ ಓಪನ್ ಸೆಫೈನಲ್ನಲ್ಲಿ ಸೋಲುಂಡು ಟೂರ್ನಿಯಿಂದ ಹೊರ ಬಿದ್ದಿದೆ.
ಶನಿವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತೀಯ ಜೋಡಿ ಹಾಲಿ ನಂಬರ್ 1 ಮತ್ತು ಒಲಿಂಪಿಕ್ ಚಾಂಪಿಯನ್ ಆಗಿರುವ ಇಂಡೋನೇಷಿಯಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸಂಜಯ ಸುಕಮುಲ್ಜೊ ವಿರುದ್ಧ 21-16, 21-18ರಿಂದ ಸೋಲುಂಡಿತು.
44 ನಿಮಿಷಿಗಳ ಕಾಲ ನಡೆದ ಪಂದ್ಯದಲ್ಲಿ ಟೂರ್ನಿಯಲ್ಲಿ 6ನೇ ಶ್ರೇಯಾಂಕ ಪಡೆದಿರುವ ಭಾರತೀಯ ಜೋಡಿ ಪೈಪೋಟಿ ನೀಡಿತಾದರೂ ಒಂದೂ ಗೇಮ್ ಗೆಲ್ಲುವಲ್ಲಿ ವಿಫಲವಾಯಿತು.