ಕೌಲಾಲಂಪುರ್:ಮಲೇಷ್ಯಾ ಮಾಸ್ಟರ್ ಪ್ರಶಸ್ತಿ ಗೆದ್ದು ಸ್ವದೇಶಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜಪಾನಿನ ಕೆಂಟೊ ಮೊಮೊಟ ಭೀಕರ ರಸ್ತೆ ಅಪಘಾತಕ್ಕೊಳಗಾಗಿದ್ದಾರೆ.
ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಗಿರುವ ನಂಬರ್ ಒನ್ ಬ್ಯಾಡ್ಮಿಂಟನ್ ತಾರೆ ಕೆಂಟೋ ಮೊಮೊಟ ಇತ್ತೀಚೆಗೆ ಕೌಲಾಲಂಪುರದಲ್ಲಿ ನಡೆದ ಮಲೇಷ್ಯಾ ಮಾಸ್ಟರ್ ಚಾಂಪಿಯನ್ಶಿಪ್ ಗೆದ್ದಿದ್ದರು. ಸ್ವದೇಶಕ್ಕೆ ಮರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕೆಂಟೋ ಇದ್ದ ಅವರಿದ್ದ ಕಾರಿಗೆ 30 ಟನ್ ತೂಕ್ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.